ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಸುಶಾಂತ್ ಸಿಂಗ್ ರಜಪೂತ್ ಎಂಬ ನಟ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಇದುವೇ ಅವರ ಸಾವಿಗೆ ಕಾರಣವಾಯಿತು ಎಂಬ ಚರ್ಚೆಯೂ ನಡೆಯುತ್ತಿದೆ. ಅಷ್ಟಕ್ಕೂ ಡಿಪ್ರೆಷನ್ ಅಥವಾ ಖಿನ್ನತೆಗೊಳಗಾಗಿದ್ದೇವೆ ಎಂದು ತಿಳಿದುಕೊಳ್ಳುವುದು ಹೇಗೆ?ಜೀವನದಲ್ಲಿ ವೃತ್ತಿ ಅಥವಾ ವೈಯಕ್ತಿಕ ಬದುಕಿನಲ್ಲಿ ಅಭದ್ರತೆ, ಕಷ್ಟ-ನಷ್ಟಗಳಾದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತೇವೆ. ಒಂದು ವೇಳೆ ಈ ಸಂದರ್ಭದಲ್ಲಿ ನಮಗೆ ಮಾನಸಿಕವಾಗಿ ಆಸರೆ ದೊರೆತರೆ ದುಃಖದಿಂದ ಹೊರಬರಬಹುದು. ಇಲ್ಲದೇ