ಪಪ್ಪಾಯಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳಿವೆ. ಇದರಲ್ಲಿರುವ ಮೆಗ್ನೀಸಿಯುಂ, ಪೊಟಾಸ್ಸಿಯುಂ, ನಿಯಾಸಿನ್, ಕ್ಯಾರೋಟೀನ್, ಪ್ರೋಟೀನ್, ನಾರಿನಾಂಶ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಪಪೈನ್ ಎಂಬ ಕಿಣ್ವ ಅಧಿಕ ಪ್ರಮಾಣದಲ್ಲಿದ್ದು, ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಪಪ್ಪಾಯಿಯು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಇದು ಕೇವಲ ಆರೋಗ್ಯಕ್ಕಷ್ಟೆ ಅಲ್ಲದೆ ಸೌಂದರ್ಯವನ್ನು ಸಹ ಹೆಚ್ಚಿಸಲು ಸಹಾಯ ಮಾಡುತ್ತದೆ. * ಚಿಕ್ಕ ಪಪ್ಪಾಯಿಯನ್ನು ಮಕ್ಕಳಿಗೆ ನೀಡುವುದರಿಂದ ಮಕ್ಕಳಲ್ಲಿ ಜೀರ್ಣಕ್ರಿಯೆಯು ಸರಾಗವಾಗಿ ಆಗುತ್ತದೆ.