ಹಣ್ಣುಗಳ ರಾಜ ಮಾವು ಎಂಬುದು ಸಾರ್ವತ್ರಿಕ. ಆದರೆ ನಿಜವಾಗಿ ಗಾತ್ರ, ವಿನ್ಯಾಸ, ಮರ, ರುಚಿ, ಅಡುಗೆ ಹೀಗೆ ಒಂದಲ್ಲ ಒಂದು ಬಳಕೆಗೆ ಸಿಗುವ ಹಲಸು ನಿಜವಾದ ಮಹಾರಾಜ. ಈ ಹಣ್ಣು ಗಾತ್ರದಲ್ಲಿ ಹೇಗೆ ದೊಡ್ಡ ಸ್ಥಾನವನ್ನು ಪಡೆದುಕೊಂಡಿದೆಯೋ ಹಾಗೆಯೇ ಆರೋಗ್ಯದ ವಿಚಾರದಲ್ಲೂ ಬಹು ಮಹತ್ತರವಾದ ಪ್ರಯೋಜನಗಳನ್ನು ಒಳಗೊಂಡಿದೆ. ನಮ್ಮ ಆರೋಗ್ಯಕ್ಕೆ ಲಾಭದಾಯಕವಾದ ಹಲವಾರು ಪೋಷಕವಸ್ತುಗಳನ್ನು ಹಲಸು ಹೊಂದಿದೆ. ಇದರಲ್ಲಿ ವಿಟಮಿನ್ ಎ. ವಿಟಮಿನ್ ಸಿ. ಪೊಟೊಷಿಯಂ ಕ್ಯಾಲ್ಸಿಯಂ, ಐರ್ನ ಅಂಶಗಳಿವೆ.