ಮನುಷ್ಯನಿಗೆ ನಿದ್ರೆ ಬಹುಮುಖ್ಯವಾಗಿದ್ದು, ಪ್ರತಿನಿತ್ಯ 7 ರಿಂದ 9 ತಾಸು ಉತ್ತಮ ನಿದ್ದೆ ಬೇಕಾಗುತ್ತದೆ. ನಿದ್ರೆ ಸರಿಯಾಗಿ ಆದರೆ ಮಾತ್ರ ಕೆಲಸವನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಜೊತಗೆ ನಮ್ಮ ಭಾವನೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ.ಮಾನಸಿಕವಾಗಿ ದಣಿಯುತ್ತೀರಿ ಜೊತೆಗೆ ಮುಂಗೋಪ, ಇಡೀ ದಿನ ಕಿರಿಕಿರಿಯಂತಹ ಸಮಸ್ಯೆಗಳು ಎದುರಾಗುತ್ತದೆ. ಜೊತೆಗೆ ಆಲಸ್ಯರಾಗುತ್ತೀರಿ. ಇದು ಮಾನಸಿಕ ತೊಂದರೆಯಾಗಿದ್ದರೆ, ದೈಹಿಕವಾಗಿ ಅನೇಕ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತೀರಿ.ನರಮಂಡಲಕೇಂದ್ರ ನರಮಂಡಲವು ದೇಹದ ಪ್ರಾಥಮಿಕ ಮಾಹಿತಿಯ ಹೆದ್ದಾರಿಯಾಗಿದೆ.