ಮಾನವನ ದೇಹದ ಶೇ.75ರಷ್ಟು ಭಾಗ ನೀರಿನಿಂದಲೇ ಕೂಡಿದೆ. ಹೀಗಾಗಿ ನೀರು ಮಾನವನ ದೇಹಕ್ಕೆ ಅತೀ ಅವಶ್ಯಕವಾದ ಅಂಶವಾಗಿದೆ. ಮೆದುಳು, ಚರ್ಮ ಮತ್ತು ಹೃದಯದ ಆರೋಗ್ಯವನ್ನು ನಿಯಂತ್ರಿಸುವುದರಿಂದ ಹಿಡಿದು, ದೇಹದ ಎಲ್ಲಾ ಅಂಗಗಳ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೀರು ಪ್ರಮುಖ ಪಾತ್ರವಹಿಸುತ್ತದೆ. ತಜ್ಞರ ಪ್ರಕಾರ ಪುರುಷರು ದಿನಕ್ಕೆ 3.5 ಲೀ ನೀರನ್ನು ಸೇವಿಸಬೇಕು ಹಾಗೂ ಮಹಿಳೆಯರು2.5 ಲೀ ನೀರನ್ನು ಸೇವಿಸಬೇಕು ಎನ್ನುತ್ತಾರೆ. ಮಾನವನ ದೇಹ ಸರಿಯಾಗಿ ಕೆಲಸ ಮಾಡಬೇಕು. ಆರೋಗ್ಯಯುತವಾಗಿರಬೇಕು