ವಿಟಮಿನ್ ಡಿ ನಮ್ಮ ದೇಹಕ್ಕೆ ಬೇಕಾಗಿರುವ ಅಗತ್ಯ ಪೋಷಕಾಂಶಗಳಲ್ಲಿ ಒಂದಾಗಿದೆ. ಇದು ಕ್ಯಾಲ್ಸಿಯಂ ನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ಸ್ನಾಯುಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಸಹಕಾರಿಯಾಗಿದೆ. ಅಷ್ಟೇ ಅಲ್ಲ, ಮೆದುಳಿನಿಂದ ನರಗಳ ಮೂಲಕ ದೇಹಕ್ಕೆ ಸಂದೇಶವನ್ನು ರವಾನಿಸಲು ವಿಟಮಿನ್ ಡಿ ಸಹಾಯ ಮಾಡುತ್ತದೆ. ಹಾಗೂ ಬಲವಾದ ರೋಗನಿರೋಧಕ ಶಕ್ತಿಗಾಗಿ ವಿಟಮಿನ್ ಡಿ ಪೋಷಕಾಂಶವು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗಿದೆ. ಬೆಳಗ್ಗಿನ ಸಮಯದಲ್ಲಿ ಸೂರ್ಯನ ಬೆಳಕಿಗೆ ದೇಹವನ್ನು