ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಆಹಾರದಷ್ಟೇ ರಾತ್ರಿಯ ನಿದ್ದೆಯೂ ಸಹ ಉತ್ತಮ ಆರೋಗ್ಯಕ್ಕೆ ಅಗತ್ಯವಾಗಿದೆ. ನಿದ್ರಾಹೀನತೆಯು ನಿಮ್ಮ ಹಾರ್ಮೋನುಗಳು, ವ್ಯಾಯಾಮದ ಕಾರ್ಯಕ್ಷಮತೆ ಮತ್ತು ಮಿದುಳಿನ ಕಾರ್ಯದ ಮೇಲೆ ತಕ್ಷಣದ ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ. ವಯಸ್ಕರು ಹಾಗೂ ಮಕ್ಕಳಲ್ಲಿ ತೂಕದ ಹೆಚ್ಚಳಕ್ಕೆ ಕಾರಣವಾಗುತ್ತದೆ ಮತ್ತು ಹಲವು ರೋಗಗಳ ಅಪಾಯವನ್ನು ತಂದೊಡ್ಡುತ್ತದೆ. ನಿಮ್ಮ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ರಾತ್ರಿಯ ಒಳ್ಳೆಯ ನಿದ್ದೆ ಬಹಳ ಒಳ್ಳೆಯದಾಗಿದೆ. ಉತ್ತಮ ನಿದ್ದೆಯನ್ನು ನಿಮ್ಮದಾಗಿಸಿಕೊಳ್ಳಲು