ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ ಅಂತಾರೆ. ಹಾಗಿದ್ದರೇ ಚೆನ್ನ. ಜಗಳವಾದ ಮೇಲೆ ಇಬ್ಬರೂ ಪರಸ್ಪರ ತಬ್ಬಿಕೊಳ್ಳುವುದರಿಂದ ಸಾಕಷ್ಟು ಲಾಭವಿದೆ ಎಂದು ಇತ್ತೀಚೆಗಿನ ಅಧ್ಯಯನ ವರದಿಯೊಂದು ಹೇಳಿದೆ.