ನಮ್ಮ ದೇಹದಲ್ಲಿರುವ ಸೂಕ್ಷ್ಮ ಅಂಗಾಂಗಗಳಲ್ಲಿ ಥೈರಾಯ್ಡ್ ಗ್ರಂಥಿಯು ಒಂದು. ಥೈರಾಯ್ಡ್ ಗ್ರಂಥಿಗೆ ಸ್ವಲ್ಪ ಏರುಪೇರು ಉಂಟಾದರೂ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತದೆ.ಅನಾರೋಗ್ಯಕರ ಜೀವನ ಶೈಲಿಯನ್ನು ದೇಹಕ್ಕೆ ರೂಢಿಸಿಕೊಳ್ಳುವುದರಿಂದ ಈಗಿನ ಜನರು ಚಿಕ್ಕ ವಯಸ್ಸಿನಲ್ಲಿಯೇ ಥೈರಾಯ್ಡ್ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದ ಮೇಲೆ ನಿಗಾ ಇಟ್ಟು ಒತ್ತಡ ಕಡಿಮೆ ಮಾಡಿಕೊಂಡು, ಪೌಷ್ಟಿಕ ಆಹಾರಗಳನ್ನು ಹೆಚ್ಚು ಸೇವನೆ ಮಾಡುವುದರಿಂದ ಥೈರಾಯ್ಡ್ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬಹುದು.ಆಯುರ್ವೇದ ತಜ್ಞರು ಹೇಳುವ ಪ್ರಕಾರ ತೆಂಗಿನಕಾಯಿಯನ್ನು ಯಾವುದೇ ರೀತಿಯಲ್ಲಿ ದೇಹಕ್ಕೆ ಸೇವಿಸಬಹುದು-