ನಾವು ಪ್ರತಿದಿನ ಸೇವಿಸುವ ಆಹಾರದಲ್ಲಿ ಉಪ್ಪು ಅತ್ಯಗತ್ಯ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ, ಅಗತ್ಯಕ್ಕಿಂತ ಹೆಚ್ಚು ಉಪ್ಪು (ಸೋಡಿಯಂ) ಸೇವಿಸುವುದು ಆರೋಗ್ಯದ ಮೇಲೆ ಹಲವಾರು ದುಷ್ಪರಿಣಾಮಗಳನ್ನು ಬೀರುತ್ತದೆ. ರಕ್ತದೊತ್ತಡ ಮತ್ತು ಹೃದಯದ ಆರೋಗ್ಯಕ್ಕೆ ಉಪ್ಪು ಹಾನಿಕರ ಎಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. ಆದರೆ, ಹೆಚ್ಚು ಉಪ್ಪು ತಿನ್ನುವುದರಿಂದ ಮಹಿಳೆಯರ ಫಲವತ್ತತೆ ಅಥವಾ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆಯೂ ಪರಿಣಾಮ ಬೀರುತ್ತದೆಯೇ? ವೈಜ್ಞಾನಿಕ ಸಂಶೋಧನೆಗಳು ಹಾಗೂ ವೈದ್ಯಕೀಯ ಅಧ್ಯಯನಗಳು ಏನು ಹೇಳುತ್ತವೆ ಎಂಬುದನ್ನು