ಸೊಳ್ಳೆಗಳನ್ನು ಸಾಯಿಸಲು ಬಳಸುವ ಸೊಳ್ಳೆ ಬ್ಯಾಟ್ ಮಕ್ಕಳ ಜೀವಕ್ಕೆ ಅಪಾಯಕಾರಿ

ಬೆಂಗಳೂರು| pavithra| Last Modified ಬುಧವಾರ, 8 ಮೇ 2019 (09:24 IST)
ಬೆಂಗಳೂರು : ಇತ್ತೀಚೆಗೆ ಸೊಳ್ಳೆಗಳ ಹಾವಳಿ ಹೆಚ್ಚಾಗಿರುವುದರಿಂದ ಸೊಳ್ಳೆ ಹೋಗಲಾಡಿಸಲು ಬ್ಯಾಟ್ ಗಳನ್ನು ಬಳಸುತ್ತಾರೆ. ಆದರೆ ಸೊಳ್ಳೆ ಬ್ಯಾಟ್ ಗಳು ತುಂಬಾ ಅಪಾಯಕಾರಿ ಎಂದು ಸಂಶೋಧನೆಯೊಂದು ತಿಳಿಸಿದೆ.
> > ಹೈದರಾಬಾದ್ ನ ಸೆಂಟರ್ ಫಾರ್ ಮಟೀರಿಯಲ್ಸ್ ಫಾರ್ ಇಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಚೀನಾ ನಿರ್ಮಿತ ಅಗ್ಗದ ಸೊಳ್ಳೆ ಬ್ಯಾಟುಗಳಲ್ಲಿ ಮಿತಿ ಮೀರಿದ ಸೀಸದ ಅಂಶವು ಪರಿಸರ ಹಾಗೂ ಮಕ್ಕಳ ಆರೋಗ್ಯದ ಮೇಲೆ ಬೀರುತ್ತದೆ ಎಂದು ತಿಳಿಸಿದೆ.


ಹಾಗೇ ಯೂರೋಪ್ ಒಕ್ಕೂಟದ ತಜ್ಞರು ನಿಗದಿಪಡಿಸಿರುವ ಮಾನದಂಡಗಳ ಅನುಸಾರ, ಸೊಳ್ಳೆ ಬ್ಯಾಟ್ ಗಳಲ್ಲಿ ಸೀಸದ ಅಂಶವು ಗರಿಷ್ಠ 1000 ಪಿಪಿಎಂ(ಪಾರ್ಟ್ಸ್ ಪರ್ ಮಿಲಿಯನ್) ಇರಬೇಕು. ಆದರೆ ಚೀನಾ ನಿರ್ಮಿತ ಸೊಳ್ಳೆ ಬ್ಯಾಟ್ ಗಳಲ್ಲಿ ಇದರ ಅಂಶ 3000 ಪಿಪಿಎಂನಿಂದ 82 ಸಾವಿರ ಪಿಪಿಎಂವರೆಗೂ ಇದೆ ಎಂದು ತಿಳಿದುಬಂದಿದೆ. ಅಲ್ಲದೇ 2016ರಲ್ಲಿ ಚೀನಾದಿಂದ 2 ಲಕ್ಷ ಸೊಳ್ಳೆ ಬ್ಯಾಟ್ ಗಳನ್ನು ಭಾರತ ಆಮದು ಮಾಡಿಕೊಂಡಿದೆ ಎಂದು ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 


ಇದರಲ್ಲಿ ಇನ್ನಷ್ಟು ಓದಿ :