ಮದುವೆ ಎನ್ನುವುದು ಜೀವನದ ಒಂದು ಪ್ರಮುಖ ಘಟ್ಟ. ವಿವಾಹದ ಬಳಿಕ ನಮ್ಮ ಜೀವನವು ಸಂತೋಷದಿಂದ ಕೂಡಿರುತ್ತದೆಯೋ ಅಥವಾ ಇಲ್ಲವೋ ಎಂಬುದು ನಾವು ಆರಿಸುವ ಸಂಗಾತಿಯ ಮೇಲೆ ಅವಲಂಬಿತವಾಗಿರುತ್ತದೆ. ಅದಕ್ಕಾಗಿಯೇ ನಾವು ಕೂಲಂಕುಶವಾಗಿ ಪರಿಶೀಲಿಸಿದ ನಂತರವೇ ಸರಿಯಾದ ಜೀವನ ಸಂಗಾತಿಯನ್ನು ಆಯ್ಕೆ ಮಾಡಬೇಕಾಗುತ್ತದೆ. ಇಲ್ಲವಾದರೆ ನಿಮ್ಮ ಸುಃಖ ದುಃಖಗಳಲ್ಲಿ ನಿಮಗೆ ಬೆಂಬಲವಾಗಿ ನಿಲ್ಲಬೇಕಾದ ವ್ಯಕ್ತಿಯೇ ನಿಮಗೆ ಸಮಸ್ಯೆಯಾಗಿಬಿಡುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಎಚ್ಚರದಿಂದಿರಬೇಕು.