ಚಳಿಗಾಲದಲ್ಲಿ ಚರ್ಮದ ಆರೈಕೆ ಎಲ್ಲರಿಗೂ ಕಷ್ಟವೇ. ಕೈಕಾಲುಗಳೆಲ್ಲ ಬಿರುಕು ಬಿಟ್ಟು ನೋಡಲು ಅಸಹ್ಯವಾಗಿ ಕಂಡರೆ, ತುಟಿಯೂ ಒಣಗಿ ರಕ್ತ ಸೋರಿ, ಮುಖದ ಚರ್ಮವೂ ಒರಟಾಗಿ ಏನು ಮಾಡಲಿ ಎಂದು ಅರ್ಥವಾಗುವುದಿಲ್ಲ. ಇದು ಕೇವಲ ಹುಡುಗಿಯರ ಸಮಸ್ಯೆ ಮಾತ್ರವಲ್ಲ. ಹುಡುಗರದ್ದೂ ಕೂಡಾ ಬರುತ್ತದೆ. ಎಲ್ಲ ವಯಸ್ಸಿನವರಿಗೂ ಚಳಿಗಾಲದಲ್ಲಿ ಚರ್ಮದ ರಕ್ಷಣಯೇ ದೊಡ್ಡ ಸಮಸ್ಯೆ. ಹಾಗಾಗಿ ಚಳಿಗಾಲದಲ್ಲಿ ಚರ್ಮ ನುಣುಪಾಗಿರಲು ವಯಸ್ಸು ಹಾಗೂ ಲಿಂಗಬೇಧವಿಲ್ಲದೆ ಮನೆಯಲ್ಲೇ ಮಾಡಬಹುದಾದ ರಕ್ಷಣೆಯ ಕೆಲವು ವಿಧಾನಗಳು ಇಲ್ಲಿವೆ.