ಹೈದರಾಬಾದ್ : ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 336, 184 ಎಂವಿ ಕಾಯ್ದೆಯಡಿ ಅತಿ ವೇಗ, ನಿರ್ಲಕ್ಷ್ಯ ಆರೋಪದಡಿ ಪೊಲೀಸರು ನಟ ಸಾಯಿ ಧರಮ್ ತೇಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸ್ನೇಹಿತರೊಂದಿಗೆ ಬೈಕ್ ರೈಡ್ ಗೆ ತೆರಳಿದ್ದ ಧರಮ್ ತೇಜ್ ನಿನ್ನೆ ತಡರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಬ್ರಿಡ್ಜ್