ಇಂಫಾಲ್ : ರಾಜ್ಯದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿ ದಾಳಿ ನಡೆಸಿದ್ದ ಕನಿಷ್ಠ 40 ಮಂದಿ ದಂಗೆಕೋರರು ಹತರಾಗಿದ್ದಾರೆ. ಇನ್ನೂ ಕೆಲವು ಕಿಡಿಗೇಡಿಗಳನ್ನ ಬಂಧಿಸಲಾಗಿದೆ ಎಂದು ಸಿಎಂ ಎ. ಬಿರೇನ್ ಸಿಂಗ್ ಭಾನುವಾರ ತಿಳಿಸಿದ್ದಾರೆ.ಮಣಿಪುರದಲ್ಲಿ ಸದ್ಯ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಇದೇ ತಿಂಗಳ ಮೇ 3ರಂದು ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ