ಮಾಸ್ಕೋ : ಉಕ್ರೇನ್ ವಿರುದ್ಧ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಅಮೆರಿಕ ಮತ್ತು ರಷ್ಯಾ ಮುಖಾಮುಖಿಯಾಗಿದೆ. ರಷ್ಯಾದ Su-27 ಜೆಟ್ ಫೈಟರ್ ಕಪ್ಪು ಸಮುದ್ರದ ಮೇಲೆ ಅಮೆರಿಕದ ಒಕಿ-9 ರೀಪರ್ ಡ್ರೋನ್ಗೆ ಡಿಕ್ಕಿ ಹೊಡೆದಿದೆ ಎಂದು ಯುಎಸ್ ಮಿಲಿಟರಿಯ ಯುರೋಪಿಯನ್ ಕಮಾಂಡ್ ತಿಳಿಸಿದೆ. ನಮ್ಮ ಒಕಿ-9 ಡ್ರೋನ್ ಅಂತಾರಾಷ್ಟ್ರೀಯ ವಾಯುಪ್ರದೇಶದಲ್ಲಿ ಎಂದಿನಂತೆ ಕಾರ್ಯಾಚರಣೆ ನಡೆಸುತ್ತಿತ್ತು. ಅದನ್ನು ರಷ್ಯಾದ ಜೆಟ್ ತಡೆಹಿಡಿದು ಹೊಡೆದುರುಳಿಸಿದೆ. ಇದರ ಪರಿಣಾಮವಾಗಿ ಡ್ರೋನ್ ಪತನಗೊಂಡಿದೆ ಎಂದು