ಪ್ಯಾರಿಸ್ : ಮುಸ್ಲಿಂ ಮಹಿಳೆಯರು ಧರಿಸುವ ಅಬಯಾ ಉಡುಪನ್ನು ಶಾಲೆಗಳಲ್ಲಿ ಧರಿಸುವುದನ್ನು ಫ್ರೆಂಚ್ ಅಧಿಕಾರಿಗಳು ನಿಷೇಧಿಸಲಿದ್ದಾರೆ ಎಂದು ಅಲ್ಲಿನ ಶಿಕ್ಷಣ ಸಚಿವರು ಭಾನುವಾರ ತಿಳಿಸಿದ್ದಾರೆ. ಅಬಯಾ ಉಡುಪು ಫ್ರಾನ್ಸ್ ಶಿಕ್ಷಣದಲ್ಲಿ ಕಟ್ಟುನಿಟ್ಟಾದ ಜಾತ್ಯತೀತ ಕಾನೂನನ್ನು ಉಲ್ಲಂಘಿಸಿದೆ ಎಂದು ವಾದಿಸಿದ ಅವರು, ಇನ್ನು ಮುಂದೆ ಶಾಲೆಗಳಲ್ಲಿ ಅಬಯಾ ಧರಿಸಲು ಅವಕಾಶವಿರುವುದಿಲ್ಲ. ಸೆಪ್ಟೆಂಬರ್ 4 ರಂದು ರಾಷ್ಟ್ರವ್ಯಾಪಿ ವಿದ್ಯಾರ್ಥಿಗಳು ಶಾಲೆಗೆ ಹಿಂದಿರುಗುವುದಕ್ಕೂ ಮೊದಲು ರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಸ್ಪಷ್ಟವಾದ ನಿಯಮಗಳನ್ನು ತರುವುದಾಗಿ