ನವದೆಹಲಿ, ಅ.1 : ದೇಶದ ಪ್ರತಿಷ್ಠಿತ ಏರ್ ಇಂಡಿಯಾವನ್ನು ಟಾಟಾ ಸನ್ಸ್ ಸಮೂಹ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಹಸ್ಯವಾಗಿರಿಸಲಾದ ನಿರ್ಣಯದ ಬಗ್ಗೆ ಬ್ಲೂಂಬರ್ಗ್ ಸುದ್ದಿ ಸಂಸ್ಥೆ ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದು, ಏರ್ ಇಂಡಿಯಾವನ್ನು ಟಾಟಾ ಸಂಸ್ಥೆಗೆ ಸಂಪೂರ್ಣವಾಗಿ ಮಾರಾಟ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಚಿವ ಸಮಿತಿ ಅನುಮೋದನೆ ನೀಡಿದೆ. ಸಮಿತಿಯಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ವಾಣಿಜ್ಯ