ವಾಷಿಂಗ್ಟನ್ : ಇ-ಕಾಮರ್ಸ್ ದೈತ್ಯ ಅಮೆಜಾನ್ ಈ ವರ್ಷದ 2ನೇ ಸುತ್ತಿನ ಉದ್ಯೋಗಿಗಳ ಕಡಿತವನ್ನು ಘೋಷಿಸಿದೆ. ಕಳೆದ ಬಾರಿ 18,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದ ಅಮೆಜಾನ್ ಈ ಬಾರಿ 9,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿದೆ. ಅಮೆಜಾನ್ ಸಿಇಒ ಆಂಡಿ ಜಾಸ್ಸಿ ತನ್ನ ಉದ್ಯೋಗಿಗಳಿಗೆ ಪತ್ರ ಬರೆದು, ವಜಾಗೊಳಿಸುತ್ತಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಕಳೆದ 3 ತಿಂಗಳುಗಳಿಂದ ಕಂಪನಿ 27,000ಕ್ಕೂ ಅಧಿಕ ಉದ್ಯೋಗಿಗಳನ್ನು ಕಡಿತಗೊಳಿಸುತ್ತಿದೆ. ಇದು ಕಂಪನಿಯ ಇತಿಹಾಸದಲ್ಲೇ