ಬಿಬಿಸಿಯ ಅಂತಾರಾಷ್ಟ್ರೀಯ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ತೆರಿಗೆ ಇಲಾಖೆಗೆ ಗುಮಾನಿ ಇದೆ. ಭಾರತದಲ್ಲಿ ಗಳಿಸಿದ ಲಾಭವನ್ನು ಬ್ರಿಟನ್ಗೆ ಸಂಸ್ಥೆ ಅಕ್ರಮವಾಗಿ ವರ್ಗಾವಣೆ ಮಾಡಿರುವ ಆರೋಪದ ಮೇರೆಗೆ ಈ ದಾಳಿಯನ್ನು ನಡೆಸಲಾಗಿದೆ. ಬಿಬಿಸಿಗೆ ಈ ಕುರಿತು ಈ ಹಿಂದೆ ನೋಟಿಸ್ ನೀಡಿದ್ದರೂ ಉತ್ತರ ಬಾರದ ಕಾರಣ ಪರಿಶೀಲನೆ ನಡೆಸಲಾಗಿದೆ ಎಂದು ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ನರೇಂದ್ರ ವಿರುದ್ಧದ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದಕ್ಕಾಗಿ ಬಿಬಿಸಿಯನ್ನು ತೆರಿಗೆ ಇಲಾಖೆ ಗುರಿಯಾಗಿಸಿಕೊಂಡಿದೆ