ಕಾಬೂಲ್ : ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಶುಕ್ರವಾರ ಬೆಳಗ್ಗೆ ಶಿಕ್ಷಣ ಕೇಂದ್ರವೊಂದರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಭಾರತೀಯ ಕಾಲಮಾನ ಬೆಳಗ್ಗೆ 7:30ಕ್ಕೆ ಕಾಜ್ ಶಿಕ್ಷಣ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ತಿಳಿಸಿದ್ದಾರೆ.ದುರದೃಷ್ಟವಶಾತ್ ಸ್ಫೋಟವು ಮಾನವ ಸಾವು-ನೋವುಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಜದ್ರಾನ್ ಹೇಳಿದ್ದಾರೆ.ಹಜಾರಾ ನೆರೆಹೊರೆಯಲ್ಲಿರುವ ಕಾಜ್ ಶೈಕ್ಷಣಿಕ ಕೇಂದ್ರವನ್ನು