ಮೊಗಡಿಶು : ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾದ ಸೊಮಾಲಿಯಾದಲ್ಲಿ ಸ್ಫೋಟ ಸಂಭವಿಸಿದ್ದು, 25 ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫೋಟದಲ್ಲಿ 53 ಮಕ್ಕಳು ಗಾಯಗೊಂಡಿದ್ದಾರೆ. ಮೃತರ ಪೈಕಿ 22 ಮಕ್ಕಳ ಶವಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ