ಪ್ಯಾರಿಸ್ : ವಿಶ್ವದಲ್ಲೇ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳ ಪೈಕಿ ಪ್ಯಾರಿಸ್ನಲ್ಲಿರುವ ಐಫೆಲ್ ಟವರ್ ಕೂಡ ಒಂದು. ವಿಶ್ವವಿಖ್ಯಾತ ಐಫೆಲ್ ಟವರ್ಗೂ ಕಂಟಕ ಎದುರಾಗಿದೆ. ಹೌದು, ಪ್ಯಾರಿಸ್ನ ಐಫೆಲ್ ಟವರ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಫ್ರೆಂಚ್ ಪೊಲೀಸರು ತಿಳಿಸಿದ್ದಾರೆ. ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ಐಫೆಲ್ ಟವರ್ ವೀಕ್ಷಣೆಗೆ ಬಂದಿದ್ದ ಪ್ರವಾಸಿರನ್ನು ಸ್ಥಳಾಂತರ ಮಾಡಲಾಗಿದೆ. ಐಫೆಲ್ ಟವರ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ