ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಬಹು ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳನ್ನ ಖಂಡಿಸಿರುವ ಬ್ರಿಕ್ಸ್ ರಾಷ್ಟ್ರಗಳ ಮುಖಂಡರು ಭಯೋತ್ಪಾದಕ ಸಂಘಟನೆಗಳ ನಿಗ್ರಹಕ್ಕೆ ಜಂಟಿ ನಿರ್ಣಯ ಕೈಗೊಂಡಿದ್ಧಾರೆ. ಗೋವಾ ಶೃಂಗಸಭೆಯಲ್ಲೇ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ವಿರುದ್ಧ ನಿರ್ಣಯ ಕೈಗೊಳ್ಳಲು ಪ್ರಧಾನಿ ನರೇಂದ್ರಮೋದಿ ಮುದಾಗಿದ್ದರೂ ಅದು ಸಾಧ್ಯವಾಗಿರಲಿಲ್ಲ. ಚೀನಾದ ಶೃಂಗಸಭೆಯಲ್ಲಿ ಬ್ರಿಕ್ಸ್`ನ ಸದಸ್ಯ ರಾಷ್ಟ್ರಗಳಾದ ಚೀನಾ, ರಷ್ಯಾ, ಬ್ರೆಜಿಲ್, ದಕ್ಷಿಣ ಆಫ್ರಿಕಾ