ಇಟಾನಗರ : ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ಈ ಮೂಲಕ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾವು ಇದು ಮೂರನೇ ಬಾರಿಗೆ ಮರುನಾಮಕರಣ ಮಾಡಿದೆ. ಅದನ್ನು ಜಂಗ್ನಾನ್, ಟಿಬೆಟ್ನ ದಕ್ಷಿಣ ಭಾಗ ಎಂದು ಕರೆದಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಸೋಮವಾರ ಚೀನಾದ ಕ್ಯಾಬಿನೆಟ್, ಸ್ಟೇಟ್ ಕೌನ್ಸಿಲ್ ನೀಡಿದ ಭೌಗೋಳಿಕ ಹೆಸರುಗಳ ಮೇಲಿನ ನಿಯಮಗಳಿಗೆ ಅನುಸಾರವಾಗಿ ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಬಿಡುಗಡೆ ಮಾಡಿದೆ.