ಬೀಜಿಂಗ್ : ತೈವಾನ್ ವಿಚಾರವಾಗಿ ಅಮೆರಿಕ ಮತ್ತು ಚೀನಾದ ನಡುವೆ ನಡೆಯುತ್ತಿರುವ ಗುದ್ದಾಟ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ವಿಚಾರವಾಗಿ ಸಮನ್ವಯತೆ ಸಾಧಿಸಲು ಕರೆದಿದ್ದ ವರ್ಚುವಲ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್ಪಿಂಗ್ ಅಮೆರಿಕ ಅಧ್ಯಕ್ಷ ಜೋ ಬಿಡೆನ್ಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದು, ಬೆಂಕಿ ಜೊತೆ ಆಟ ಆಡುವವರು ಸುಟ್ಟು ಭಸ್ಮವಾಗುತ್ತಾರೆ ಎಂದು ಹೇಳಿದ್ದಾರೆ. ಸುಮಾರು ಮೂರುವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ವರ್ಚುವಲ್ ಸಭೆಯಲ್ಲಿ ಹಲವು ವಿಷಯಗಳನ್ನು