ನವದೆಹಲಿ: ಭಾರತೀಯ ಸೇನಾ ಕಾರ್ಯಾಚರಣೆ ಪ್ರಧಾನ ನಿರ್ದೇಶಕ (ಡಿಜಿಎಂಓ) ಜನರಲ್ ರಣಬೀರ್ ಸಿಂಗ್, ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ದಾಳಿ ನಡೆಸಿ 38 ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನುವ ಹೇಳಿಕೆ ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಪಾಕ್ ಪ್ರಧಾನಿ ನವಾಜ್ ಷರೀಫ್, ಭಾರತೀಯ ಸೇನಾ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.