Widgets Magazine

ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿರುವ ಡೊನಾಲ್ಡ್ ಟ್ರಂಪ್

ನವದೆಹಲಿ| pavithra| Last Modified ಬುಧವಾರ, 15 ಜನವರಿ 2020 (05:56 IST)
ನವದೆಹಲಿ :  ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಕಳೆದ ವಾರ ಪ್ರಧಾನಿ ಮೋದಿ ಹಾಗೂ ಟ್ರಂಪ್ ನಡುವೆ ದೂರವಾಣಿ ಸಂಭಾಷಣೆ ನಡೆದಿದ್ದು, ಆ ವೇಳೆ ಪ್ರಧಾನಿ ಮೋದಿ ಭಾರತಕ್ಕೆ ಬರುವಂತೆ ಟ್ರಂಪ್ ಅವರನ್ನು ಆಹ್ವಾನಿಸಿದ್ದಾರೆ. ದೆಹಲಿಯ ಗಣರಾಜ್ಯೋತ್ಸವ  ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಫೆಬ್ರವರಿಯಲ್ಲಿ ಡೊನಾಲ್ಡ್ ಟ್ರಂಪ್ ನವದೆಹಲಿಗೆ ಆಗಮಿಸುವ ಸಾಧ್ಯತೆ ಇದ್ದು, ಅವರ ಭೇಟಿ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದರಲ್ಲಿ ಇನ್ನಷ್ಟು ಓದಿ :