ಟೋಕಿಯೋ : ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಹತ್ತಿರದಲ್ಲೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ. ಪಶ್ಚಿಮ ಜಪಾನ್ನ ವಕಯಾಮಾದಲ್ಲಿ ಕಿಶಿಡಾ ಭಾಷಣ ಮಾಡುತ್ತಿದ್ದರು. ಈ ವೇಳೆ ಪ್ರಧಾನಿಯೆಡೆಗೆ ಸ್ಫೋಟಕ ವಸ್ತುವನ್ನು ಎಸೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.ಘಟನೆ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಅವರೆಡೆಗೆ