ಕತಾರ್ ದೇಶ ಪ್ರತ್ಯೇಕತಾವಾದಕ್ಕೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಸೌದಿ ಅರೇಬಿಯಾ ಮತ್ತು ಈಜಿಪ್ತ್ ಸೇರಿದಂತೆ ಐದು ಅರಬ್ ರಾಷ್ಟ್ರಗಳು ತಮ್ಮ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿವೆ ಪ್ರದೇಶವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಇರಾನ್ ಬೆಂಬಲಿತ ಪ್ರತ್ಯೇಕತಾವಾದಿ ಗುಂಪುಗಳಿಗೆ ಕತಾರ್ ದೇಶ ಬೆಂಬಲ ನೀಡುತ್ತಿದೆ ಎನ್ನುವ ಆಘಾತಕಾರಿ ಸಂಗತಿ ಬಹಿರಂಗವಾದ ಹಿನ್ನೆಲೆಯಲ್ಲಿ ಬಹರೈನ್, ಯುಎಇ, ಯೆಮೆನ್, ಮಾಲ್ದೀವ್ಸ್, ಸೌದಿ ಅರೇಬಿಯಾ ಮತ್ತು ಈಜಿಪ್ತ್ ದೇಶಗಳು ತಮ್ಮ ಸಂಬಂಧವನ್ನು ಕಡಿದುಕೊಂಡಿವೆ.