ನವದೆಹಲಿ : ಅದಾನಿ ಗ್ರೂಪ್ನ ವರದಿಯ ನಂತರ ಅಮೆರಿಕ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ ಗುರುವಾರ ಮತ್ತೊಂದು ಹೊಸ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ. ತನ್ನ ಟ್ವೀಟ್ನಲ್ಲಿ ಶೀಘ್ರದಲ್ಲೇ ಹೊಸ ವರದಿ ಬಿಡುಗಡೆ ಮಾಡುವುದಾಗಿ ಸಂಸ್ಥೆ ಪ್ರಕಟಿಸಿದೆ. ಜನವರಿಯಲ್ಲಿ ಹಿಂಡೆನ್ಬರ್ಗ್ ಅದಾನಿ ಸಮೂಹ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದೆ. ಅಕ್ರಮದ ಮೂಲಕ ತನ್ನ ಸಮೂಹದ ಕಂಪನಿಯ ಷೇರು ಬೆಲೆಯನ್ನು ಏರಿಕೆ ಮಾಡಿದ ಎಂದು ಆರೋಪಿಸಿ ವರದಿಯೊಂದನ್ನು ಬಿಡುಗಡೆ ಮಾಡಿತ್ತು.