ನವದೆಹಲಿ: ಭಾರತ ಮತ್ತು ಚೀನಾ ನಡುವೆ ಲಡಾಕ್ ಗಡಿಯಲ್ಲಿ ಉದ್ಭವವಾಗಿರುವ ಗಡಿ ಸಮಸ್ಯೆ ನಿವಾರಣೆಗೆ ಮೂರನೆಯ ರಾಷ್ಟ್ರದ ಮಧ್ಯಸ್ಥಿಕೆ ಬೇಡ ಎಂದು ಭಾರತ ಸ್ಪಷ್ಟವಾಗಿ ಹೇಳಿದೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ವಿದೇಶಾಂಗ ಇಲಾಖೆ ಸದ್ಯಕ್ಕೆ ನಮ್ಮ ಬಿಕ್ಕಟ್ಟು ಬಗೆಹರಿಸಲು ರಾಜತಾಂತ್ರಿಕ ಯೋಜನೆಗಳಿವೆ. ಇದಕ್ಕೆ ಮೂರನೆಯ ರಾಷ್ಟ್ರದ ಮಧ್ಯಸ್ಥಿಕೆ