ಭಾರತ ಮತ್ತು ಪಾಕಿಸ್ತಾನ ಕೂಡಾ ಭಯೋತ್ಪಾದನೆಗೆ ಬಲಿಪಶುವಾದ ರಾಷ್ಟ್ರಗಳು. ಪಾಕಿಸ್ತಾನ ಕೂಡಾ ಉಗ್ರರನ್ನು ನಿರ್ಮೂಲನೆಗೊಳಿಸಲು ಪ್ರಯತ್ನಿಸುತ್ತಿದೆ. ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ತಾನದ ಸಂಕಷ್ಟವನ್ನು ಪರಿಗಣಿಸಬೇಕಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನ್ಯಿಂಗ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೀಡಿದ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್, ಯಾವುದೇ ದೇಶವನ್ನು ಭಯೋತ್ಪಾದನೆಗೆ ಹೋಲಿಸುವುದನ್ನು ಚೀನಾ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.