ಇಸ್ಲಾಮಾಬಾದ್ : ಪಾಕಿಸ್ತಾನದ ಸಿಂದ್ ಪ್ರಾಂತ್ಯದ ಹೈದರಾಬಾದ್ನಲ್ಲಿ ಹಿಂದೂ ಹುಡುಗಿಯೊಬ್ಬಳನ್ನು ಅಪಹರಿಸಿದ ಘಟನೆ ನಡೆದಿದೆ.ಘಟನೆಗೆ ಸಂಬಂಧಿಸಿ ಹುಡುಗಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಚಂದ್ರ ಮೆಹರಾಜ್ ಎಂಬಾಕೆ ಹೈದರಾಬಾದ್ನ ಫತೇ ಚೌಕ್ನಿಂದ ಮನೆಗೆ ಮರಳುತ್ತಿದ್ದಾಗ ಅವಳನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ದೂರಿನಲ್ಲಿ ಆಕೆಯ ಪೋಷಕರು ತಿಳಿಸಿದ್ದಾರೆ. ಆದರೆ ಈವರೆಗೆ ಆಕೆ ಪತ್ತೆಯಾಗಿಲ್ಲ.ಕೇವಲ 2 ವಾರದಲ್ಲಿ ಬೆಳಕಿಗೆ ಬಂದ 4ನೇ ಪ್ರಕರಣ ಇದಾಗಿದೆ. ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೂವರು ಮಹಿಳೆಯರನ್ನು ಅಪಹರಿಸಿ