ವಾಷಿಂಗ್ಟನ್ : ಯುಎಸ್ನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ಗೆ ಯಾವುದೇ ರೋಗ ಲಕ್ಷಣಗಳಿಲ್ಲದೇ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.ಕಮಲಾ ಹ್ಯಾರಿಸ್ ಇಂದು ಕೋವಿಡ್ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದರೂ ಅವರು ತನ್ನ ಪ್ರತ್ಯೇಕ ನಿವಾಸದಲ್ಲಿ ವಾಸವಿದ್ದು, ದೂರದಿಂದಲೇ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ.ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ನಂತರವೇ ಶ್ವೇತ ಭವನಕ್ಕೆ ಮರಳುತ್ತೇನೆ ಎಂದು ಅವರು ಹೇಳಿದ್ದಾರೆ. ಹ್ಯಾರಿಸ್(57) ಅಧಿಕಾರ ವಹಿಸಿಕೊಳ್ಳುವ ಕೆಲ