ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಿದಾತ ಕೊನೆಗೆ ಮಾಡಿದ್ದೇನು ಗೊತ್ತಾ?

ಬಾರ್ಮರ್| pavithra| Last Updated: ಬುಧವಾರ, 9 ಡಿಸೆಂಬರ್ 2020 (11:08 IST)
ಬಾರ್ಮರ್ : ವಾರ್ಡ್ ಕೌನ್ಸಿಲರ್ ಮಹಿಳೆಯೊಬ್ಬಳು ಮಾಡುವಾಗ ವಿಡಿಯೋ ಚಿತ್ರೀಕರಿಸಿ ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಮಾನಂಗ ಎಸಗಿದ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ವರದಿಯಾಗಿದೆ.

ಆರೋಪಿ ವಾರ್ಡ್ ಕೌನ್ಸಿಲರ್ ಆಗಿದ್ದ ಸಂತ್ರಸ್ತೆಯ ದೂರದ ಸಂಬಂಧಿಯಾಗಿದ್ದು, ಆಕೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಒಮ್ಮೆ ಯಾರು ಇಲ್ಲದ ವೇಳೆ ಮನೆಗೆ ಬಂದ ಆತ ಸಂತ್ರಸ್ತೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಚಿತ್ರೀಕರಿಸಿದ್ದಾನೆ. ಬಳಿಕ ಅದನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಅಲ್ಲದೇ ತನ್ನ ಸ್ನೇಹಿತನ ಜೊತೆಗೂ ಸೆಕ್ಸ್ ಮಾಡುವಂತೆ  ಒತ್ತಾಯಿಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ವಿರುದ್ಧ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :