ನ್ಯೂಯಾರ್ಕ್ : ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ