ಸೋಲ್ : ಉತ್ತರ ಕೊರಿಯಾ ತನ್ನ ಪೂರ್ವ ಕರಾವಳಿಯಲ್ಲಿ ಎರಡು ಖಂಡಾಂತರ ಕ್ಷಿಪಣಿಗಳನ್ನು ಬುಧವಾರ ಉಡಾಯಿಸಿದೆ. ಉತ್ತರ ಕೊರಿಯಾದ ಮಧ್ಯಭಾಗದಿಂದ ಉಡಾಯಿಸಲಾದ ಈ ಎರಡು ಕ್ಷಿಪಣಿಗಳು ಕೊರಿಯನ್ ಪರ್ಯಾಯ ದ್ವೀಪದ ಪೂರ್ವ ಕರಾವಳಿಯ ನೀರಿನ ಕಡೆಗೆ ಹಾರಿದವು ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉತ್ತರ ಕೊರಿಯಾದ ಈ ಉಡಾವಣೆಗಳ ಕುರಿತು ದಕ್ಷಿಣ ಕೊರಿಯಾ ಮತ್ತು ಅಮೆರಿಕ ಗುಪ್ತಚರ ಅಧಿಕಾರಿಗಳು ಪರಿಶೀಲನೆ ಮತ್ತು ವಿಶ್ಲೇಷಣೆಯಲ್ಲಿ ತೊಡಗಿದ್ದಾರೆ ಎಂದು