ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ಘೋಷಿಸಿದ್ದಾರೆ. ಅಮೆರಿಕ ಚುನಾವಣೆ ಸಂದರ್ಭದಲ್ಲೇ ಟ್ರಂಪ್ ಈ ಕುರಿತು ಘೋಷಿಸಿದ್ದರು. ಪ್ರಸ್ತುತ ತಮ್ಮ ಘೋಷಣೆಯನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಸಾಮಾಜಿಕ ಜಾಲತಾಣಕ್ಕೆ ‘ಟ್ರೂತ್ ಸೋಷಿಯಲ್’ ಎಂದು ಹೆಸರಿಡಲಾಗಿದೆ. ನವೆಂಬರ್ನಲ್ಲಿ ‘ಟ್ರೂತ್ ಸೋಷಿಯಲ್’ ಲಾಂಚ್ ಆಗುವ ಸಾಧ್ಯತೆ ಇದೆ. ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿರುವ ಟ್ರಂಪ್, ‘‘ತಾಲಿಬಾನಿಗಳು ಟ್ವಿಟರ್ನಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿದ್ದಾರೆ. ಆದರೆ ನಮ್ಮ ಅಮೇರಿಕಾ ಅಧ್ಯಕ್ಷರು ಈ