ಇಸ್ಲಾಮಾಬಾದ್ : ಪಾಕಿಸ್ತಾನದ ಟಿವಿ ಚಾನೆಲ್ ಗಳು ಇನ್ನುಮುಂದೆ ವೀಕ್ಷಕರ ಮನಸ್ಸಿನ ಮೇಲೆ ಪರಿಣಾಮ ಬೀರುವಂತಹ ರೊಮ್ಯಾಂಟಿಕ್ ದೃಶ್ಯಗಳನ್ನು ಪ್ರದರ್ಶಿಸಬಾರದು ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಹೌದು. ಪಾಕಿಸ್ತಾನದ ಕಿರುತೆರೆ ಉದ್ಯಮದಲ್ಲಿ ಬೋಲ್ಡ್ ದೃಶ್ಯಗಳು ಪ್ರಸಾರವಾಗುತ್ತಿದ್ದು ಇವುಗಳ ವಿರುದ್ಧ ಸಾರ್ವಜನಿಕವಾಗಿ ಸಾಕಷ್ಟು ದೂರುಗಳು ಬರುತ್ತಿವೆ . ಈ ಹಿನ್ನಲೆಯಲ್ಲಿ ಪಾಕಿಸ್ತಾನ ಎಲೆಕ್ಟ್ರಾನಿಕ್ ಮೀಡಿಯಾ ರೆಗ್ಯುಲೇಟರಿ ಅಥಾರಿಟಿ(ಪಿಇಎಂಆರ್ಎ) ಟಿವಿ ಚಾನೆಲ್ ಗಳಿಗೆ ದೇಶದಲ್ಲಿ ಅಸ್ತಿತ್ವದಲ್ಲಿರುವ ಮಾಧ್ಯಮ ಮಾರ್ಗದರ್ಶಿ ಸೂತ್ರಗಳನ್ನು ಗೌರವಿಸಬೇಕು.