ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿಗೆ ಹಲವೆಡೆಯಿಂದ ಶುಭಾಷಯ ಹರಿದುಬರುತ್ತಿದೆ. ಆದರೆ ಪಾಕಿಸ್ತಾನದ ಈ ಬಾಲಕಿ ಮಾತ್ರ ಮೋದಿ ಅಭಿಮಾನಿಗಳ ಸಾಲಲ್ಲಿ ವಿಶೇಷವಾಗಿ ನಿಲ್ಲುತ್ತಾಳೆ. 11 ವರ್ಷದ ಅಖೀದತ್ ನವೀದ್ ಪಂಚ ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೋದಿಗೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾಳೆ. ಅಷ್ಟೇ ಅಲ್ಲ, ಉಭಯ ದೇಶಗಳ ನಡುವೆ ಸೇತುವೆಯಾಗಿದ್ದು, ಶಾಂತಿ ನೆಲೆಗೊಳ್ಳುವಂತೆ ಮಾಡಿ ಎಂದೂ ಮನವಿ ಮಾಡಿದ್ದಾಳೆ.ಬಹುಶಃ