ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲಿನ ದಾಳಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿದವು.ಹಿಂದೂ ಸಮುದಾಯದ ಮೇಲಿನ ದಾಳಿ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಶಿಕ್ಷಕರ ಹತ್ಯೆ ಮತ್ತು ಹಿಂದೂ ಮಹಿಳೆಯರ ಅತ್ಯಾಚಾರದ ವಿರುದ್ಧ ಚಿತ್ತಗಾಂಗ್ನಲ್ಲಿ ಪ್ರತಿಭಟನೆ ನಡೆಸಿದರು.ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಜನರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.