ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ಹಮ್ಜಾ ಶಹಬಾಜ್ ಅವರ ಆಯ್ಕೆಯನ್ನು ಖಂಡಿಸಿ ಪ್ರತಿಭಟನೆ ಭುಗಿಲೆದ್ದಿದೆ.ಈ ಬೆನ್ನಲ್ಲೇ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಹ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ.ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಪರ್ವೇಜ್ ಇಲಾಹಿ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಾಯಕ ಹಮ್ಜಾ ಶಹಬಾಜ್ ಅವರು ಪಂಜಾಬ್ನ ಮುಖ್ಯಮಂತ್ರಿಯಾಗಿ ಮರು ಆಯ್ಕೆಯಾಗಿದ್ದಾರೆ.ಪಾಕಿಸ್ತಾನ ಮುಸ್ಲಿಂ ಲೀಗ್-ಕ್ವಾಡ್ ಮತಗಳನ್ನು