ಕಾಬೂಲ್ : ಕಾಬೂಲ್ ನ ಜನವಸತಿ ಪ್ರದೇಶದ ಮೇಲೆ ರಾಕೆಟ್ ದಾಳಿ ನಡೆದಿದ್ದು ದಾಳಿಯಲ್ಲಿ ಮಗು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಅಮೆರಿಕಾ ಸೇರಿದಂತೆ ಹಲವು ದೇಶಗಳು ತಮ್ಮ ಪ್ರಜೆಗಳನ್ನು ಸ್ಥಳಾಂತರಿಸಿದ್ದವು. ಇನ್ನು ಅಮೆರಿಕಾದಿಂದ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿರುವಾಗಲೇ ಕಾಬೂಲ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುವ್ಯ ದಿಕ್ಕಿನಲ್ಲಿ ರಾಕೆಟ್ ದಾಳಿ ನಡೆದಿದ್ದು ಮಗುವೊಂದು ಸಾವನ್ನಪ್ಪಿದೆ ಎಂದು ಅಫ್ಘಾನ್ ಪೊಲೀಸ್