ವಾಷಿಂಗ್ಟನ್ : ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಒಂದಾದಮೇಲೊಂದರಂತೆ ವರದಿಯಾಗುತ್ತಲೇ ಇದೆ. ಸೋಮವಾರ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿ ಇಡೀ ರಾಷ್ಟ್ರವನ್ನು ಭಯಭೀತಗೊಳಿಸಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಅಮೆರಿಕದ ನ್ಯಾಶ್ವಿಲ್ಲೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಒಟ್ಟು 6 ಜನರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ. ಇದು 2023ರಲ್ಲಿ ಅಮೆರಿಕದ ಶಾಲೆಗಳಲ್ಲಿ ನಡೆದಿರುವ 13ನೇ ಗುಂಡಿನ ದಾಳಿಯಾಗಿದೆ. ಮಾತ್ರವಲ್ಲದೇ ಅತ್ಯಂತ ಭಯಾನಕ