ಪ್ಯೊನ್ಗ್ಯಾಂಗ್ : ಇದೇ ಮೊದಲ ಬಾರಿಗೆ ಉತ್ತರ ಕೊರಿಯಾದಲ್ಲಿ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ತೀವ್ರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.ದೇಶಕ್ಕೆ ಇದುವರೆಗೆ ಕೋವಿಡ್ ಸಾಂಕ್ರಾಮಿಕ ರೋಗ ಪ್ರವೇಶಿಸಿಲ್ಲ ಎಂದು ಇದುವರೆಗೆ ಉತ್ತರ ಕೊರಿಯಾ ಪ್ರತಿಪಾದಿಸಿತ್ತು. ಆದರೆ ಇದೀಗ ಮೊದಲ ಬಾರಿಗೆ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಸೋಂಕು ನಿರ್ಮೂಲನೆ ಮಾಡಲು ಅಧ್ಯಕ್ಷ ಕಿಮ್ ಜಾಂಗ್ ಉನ್ ಪ್ರತಿಜ್ಞೆ ಮಾಡಿದ್ದಾರೆ. ಕೊರೊನಾ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತುರ್ತು