ಲಂಡನ್ : ಹೊರ ದೇಶಗಳಿಂದ ಇಂಗ್ಲೆಂಡ್ಗೆ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವ ನಿಯಮವನ್ನು ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.ಸೋಂಕು ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಹೀಗಾಗಿ ಬೇರೆ ದೇಶಗಳಿಂದ ಬರುವವರಿಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ವಿನಾಯಿತಿ ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂಗ್ಲೆಂಡ್ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಮುಕ್ತವಾಗಿದೆ. ಆದ್ದರಿಂದ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಎರಡೂ