ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಜೋ ಬೈಡನ್ಗೆ ಇದ್ದ ಕ್ಯಾನ್ಸರ್ ಅನ್ನು ತೆಗೆದುಹಾಕಲಾಗಿದೆ. ಅವರು ಇದೀಗ ಗುಣಮುಖರಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಶ್ವೇತಭವನದ ವೈದ್ಯ ಕೆವಿನ್ ಓ’ಕಾನರ್ ಶುಕ್ರವಾರ ತಿಳಿಸಿದ್ದಾರೆ.