Widgets Magazine

ಮರಣೋತ್ತರ ಪರೀಕ್ಷೆಯಿಂದ ಬಯಲಾಯ್ತು ನಿರ್ಮಿತಾ ಕುಮಾರಿಯ ಸಾವಿನ ರಹಸ್ಯ

ಇಸ್ಲಾಮಾಬಾದ್| pavithra| Last Modified ಶುಕ್ರವಾರ, 8 ನವೆಂಬರ್ 2019 (09:30 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿ ನಿರ್ಮಿತಾ ಕುಮಾರಿ ಅನುಮಾನಸ್ಪಾದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯದು ಆತ್ಮಹತ್ಯೆಯಲ್ಲ ಮಾಡಿ ಕೊಲೆ ಮಾಡಲಾಗಿದೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.
ಲಕ್ರಾನದ ಶಹೀದ್ ಮೊರ್ತಮಾ ಬೆನಜೀರ್ ಭುಟ್ಟೊ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ಅಂತಿಮ ವರ್ಷದ ದಂತ ಶಸ್ತ್ರಚಿಕಿತ್ಸೆ ಓದುತ್ತಿರುವ  ನಿರ್ಮಿತಾ, ಹಾಸ್ಟೆಲ್ ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಸ್ಪಾದ ರೀತಿಯಲ್ಲಿ ಸಾವನಪ್ಪಿದ್ದರು.


ಇದೀಗ ಆಕೆಯ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಉಸಿರುಗಟ್ಟಿಸಿ ಕೊಲೆಮಾಡಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಅಲ್ಲದೇ ಆಕೆಯ ಬಟ್ಟೆಯಲ್ಲಿ ಪುರುಷರ ವೀರ್ಯ ಪತ್ತೆಯಾಗಿದೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :