ಕೀವ್ : ಅನಿರೀಕ್ಷಿತ ಪ್ರಮಾಣದ ಪ್ರತಿರೋಧದಿಂದಾಗಿ ಯುದ್ಧ ಗೆದ್ದು ಬೀಗುವ ರಷ್ಯಾ ಉತ್ಸಾಹಕ್ಕೆ ತಣ್ಣೀರು ಬಿದ್ದ ಬೆನ್ನಲ್ಲೇ,ನೆರೆಯ ಉಕ್ರೇನ್ ದೇಶವನ್ನು ವಿಭಜಿಸುವ ಮೂಲಕ ಪರೋಕ್ಷವಾಗಿ ಯುದ್ಧ ಗೆಲ್ಲುವ ತಂತ್ರಕ್ಕೆ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶರಣಾಗಿದ್ದಾರೆ.ಕಳೆದ ಶುಕ್ರವಾರ ರಷ್ಯಾ ಸೇನೆ, ಉಕ್ರೇನ್ನಲ್ಲಿ ನಮ್ಮ ಮೊದಲ ಹಂತದ ಕಾರ್ಯಾಚರಣೆ ಬಹುತೇಕ ಮುಕ್ತಾಯವಾಗಿದೆ ಎಂದು ಹೇಳಿದ್ದು ಇದೇ ಕಾರಣಕ್ಕಾಗಿ ಎಂದು ಹೇಳಲಾಗಿದೆ.ಒಂದು ವಾರ ಅಥವಾ 15 ದಿನದಲ್ಲಿ ಉಕ್ರೇನ್ ಅನ್ನು ಸೋಲಿಸಬಹುದು ಎನ್ನುವುದು ರಷ್ಯಾ